Connect with us

    LATEST NEWS

    ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗೀಶನ ಸಹಚರನ ಸೆರೆ

    ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗೀಶನ ಸಹಚರನ ಸೆರೆ

    ಮಂಗಳೂರು, ಮಾರ್ಚ್ 14 : ಇತ್ತೀಚೆಗೆ ಮಂಗಳೂರು ನಗರದಲ್ಲಿ ನಡೆದ ಸರಣಿ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾಗಿಯಾಗಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

    ಮಂಗಳೂರು ನಗರದಲ್ಲಿ ಇತ್ತೀಚೆಗೆ ಭೂಗತ ಪಾತಕಿ ಕಲಿ ಯೋಗೀಶ ಎಂಬಾತನು ತನ್ನ ಸಹಚರರಿಂದ ನಡೆಸಿದ ಸರಣಿ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿರುವ ಖದೀಮನನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ.

    ಮಂಗಳೂರು ಸಿಸಿಬಿ ಪೊಲೀಸ್ ನಿರೀಕ್ಷಕರಾದ ಶಾಂತರಾಮ್ ರವರ ನೇತ್ರತ್ವದ ಸಿಸಿಬಿ ತಂಡ ಈ ಕಾರ್ಯವನ್ನು ಮಾಡಿದೆ.

    ಆರೋಪಿಯಾದ ಕಾಸರಗೋಡಿನ ಮೊಹಮ್ಮದ್ ಹನೀಫ್ @ ಮೊಹಮ್ಮದ್ ಆಲಿ @ ಮುನ್ನಾ, ಪ್ರಾಯ(35), ಬಂಧಿಸಿದೆ.

    ಈತನು ಈ ಹಿಂದೆ 2017 ನೇ ಡಿಸೆಂಬರ್ ತಿಂಗಳಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ ಸ್ಟ್ರೀಟ್ ಸಂಜೀವ ಶೆಟ್ಟಿ ಟೆಕ್ಸ್ ಟೈಲ್ಸ್ ಬಟ್ಟೆ ಮಳಿಗೆಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದನು.

    ಈತನು ಈ ಹಿಂದೆ ಕಲಿ ಯೋಗೀಶನ ಜೊತೆ ನೇರ ಸಂಪರ್ಕದಲ್ಲಿದ್ದು, ಈತನ ವಿರುದ್ದ ಮಂಗಳೂರು ನಗರ,

    ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆ ಬೆದರಿಕೆ ಪ್ರಕರಣ,

    ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಫ್ತಾ ಹಣಕ್ಕಾಗಿ ಕೊಲೆ ಯತ್ನ ಪ್ರಕರಣ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ,

    ಕೊಣಾಜೆ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಸಂಚು ರೂಫಿಸಿದ ಪ್ರಕರಣ,

    ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ,

    ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಹಾಗೂ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹೀಗೆ ಈತನು ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.

    ಈತನು ನ್ಯಾಯಾಲಯದಿಂದ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನ ವಿರುದ್ಧ ವಾರಂಟ್ ಹೊರಡಿಸಿರುತ್ತದೆ.

    ಈತನು ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡ ಬಳಿಕ 2017 ಇಸವಿಯಲ್ಲಿ ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಫ್ತಾ ಹಣಕ್ಕಾಗಿ ಬೆದರಿಕೆಯೊಡ್ಡಿದ್ದ ಪ್ರಕರಣ ದಾಖಲಾಗಿರುತ್ತದೆ.

    ಅಲ್ಲದೇ ಕೇರಳ ರಾಜ್ಯದಲ್ಲಿ ಈತನ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಈತನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply