ಹೈದರಾಬಾದ್, ಡಿಸೆಂಬರ್ 16: ತಾಯಿಯ ಪ್ರೀತಿಗಿಂತ ದೊಡ್ಡದು ಯಾವುದೂ ಇಲ್ಲ ಎಂದು ಹೇಳಲಾಗುತ್ತದೆ. ಎಷ್ಟೇ ಕಷ್ಟಗಳನ್ನು ಎದುರಿಸಿದರೂ, ತಾಯಿ ಹಸಿದಿದ್ದರೂ ತನ್ನ ಮಕ್ಕಳಿಗೆ ಆಹಾರವನ್ನು ನೀಡುತ್ತಾಳೆ. ತನ್ನ ಮಗುವಿಗಾಗಿ ಅವಳು ಏನು ಬೇಕಾದರೂ ಸಹಿಸಿಕೊಳ್ಳುತ್ತಾಳೆ. ಆದರೆ ಇಲ್ಲೊಬ್ಬಳು ತಾಯಿ ತನ್ನ 7 ವರ್ಷದ ಮಗಳನ್ನು ಮೂರನೇ ಮಹಡಿಯಿಂದ ಎಸೆದು ಕೊಲೆ ಮಾಡಿದ್ದಾಳೆ.


ಹೈದರಾಬಾದ್ ನ ಮಲ್ಕಜ್‌ಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ವಸಂತಪುರಿ ಕಾಲೋನಿಯಲ್ಲಿ ಈ ಭಯಾನಕ ಘಟನೆ ನಡೆದಿದೆ. ಏಳು ವರ್ಷದ ಶರೋನಿ ಮೇರಿಯನ್ನು ಆಕೆಯ ತಾಯಿ ಮೊನಾಲಿಸಾ ಕಟ್ಟಡದ ಮೂರನೇ ಮಹಡಿಯಿಂದ ಎಸೆದಿದ್ದಾರೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಸ್ಥಳೀಯರು ಶರೋನಿಯನ್ನು ಗಾಂಧಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಮಗುವಿನ ಸ್ಥಿತಿ ಹದಗೆಟ್ಟ ಕಾರಣ ಚಿಕಿತ್ಸೆ ಪಡೆಯುತ್ತಿದ್ದಾಗ ಮಗು ಸಾವನ್ನಪ್ಪಿದೆ.

ಮಲ್ಕಾಜ್‌ಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಹಿಂದಿನ ಕಾರಣಗಳ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕರಣ ತಾಯಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

Share Information