Connect with us

    BELTHANGADI

    ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಯತ್ನ ಆರೋಪಿ ಬಂಧನ

    ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಯತ್ನ ಆರೋಪಿ ಬಂಧನ

    ಬೆಳ್ತಂಗಡಿ ಅಕ್ಟೋಬರ್ 10: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಿತ್ತಬಾಗಿಲು ನಿವಾಸಿ ಹಂಝ ಎಂದು ಗುರುತಿಸಲಾಗಿದೆ.

    ಆರೋಪಿ 12 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ ಎಂದು ಹೇಳಲಾಗಿದೆ. ಆರೋಪಿ ಕೈಯಿಂದ ತಪ್ಪಿಸಿಕೊಂಡ ಬಾಲಕಿ ನೆರೆಮನೆಯವರಿಗೆ ಮಾಹಿತಿ ನೀಡಿದ್ದಾಳೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪೋಕ್ಸೋ ಕಾಯ್ದೆಯಡಿ ಆರೋಪಿ ಹಂಝ ಬಂದಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply