DAKSHINA KANNADA
ಅಪ್ರಾಪ್ತ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದರೆ ಅದು ರೇಪ್ -ಸುಪ್ರೀಂಕೋರ್ಟ್
ಅಪ್ರಾಪ್ತ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದರೆ ಅದು ರೇಪ್ -ಸುಪ್ರೀಂಕೋರ್ಟ್
ಮಂಗಳೂರು,ಅಕ್ಟೋಬರ್ 11: ಅಪ್ರಾಪ್ತ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದುವುದನ್ನು ಅತ್ಯಾಚಾರವೆಂದು ಪರಿಗಣಿಸಲಾಗುವುದು ಎಂಬ ಐತಿಹಾಸಿಕ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ನೀಡಿದೆ. ಈ ಆದೇಶದಿಂದಾಗಿ ಅಪ್ರಾಪ್ತರ ಮತ್ತು ಬಾಲ್ಯ ವಿವಾಹಗಳ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ನಿರ್ಬಂಧ ಹೇರಿದೆ. ಹದಿನೆಂಟು ವರ್ಷಕ್ಕಿಂತ ಕಡಿಮೆ ಇರುವ ಪತ್ನಿ ಜೊತೆ ಲೈಂಗಿಕ ಸಂಪರ್ಕ ಹೊಂದಿದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ದೇಶದೆಲ್ಲೆಡೆ ಹೆಚ್ಚುತ್ತಿರುವ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ನೀಡಿರುವ ಈ ಮಹತ್ವದ ಆದೇಶದ ಬಗ್ಗೆ ದೇಶಾದ್ಯಂತ ಸ್ವಾಗತ ವ್ಯಕ್ತವಾಗಿದೆ. ಲೈಂಗಿಕ ಸಂಪರ್ಕಕ್ಕಾಗಿ ವಯಸ್ಸಿನ ಮಿತಿಯನ್ನು ಇಳಿಸಲಾಗುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಯುವತಿಯರ ವಿವಾಹದ ವಯಸ್ಸಿನ ಮಿತಿಯನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡುವುದಿಲ್ಲ ಎಂದೂ ಸುಪ್ರೀಂಕೋರ್ಟ್ ತಿಳಿಸಿದೆ. ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಕೂಡ ಮಹತ್ವದ ತೀರ್ಪು ಪ್ರಕಟಿಸಿದ ಸರ್ವೋನ್ನತ ನ್ಯಾಯಾಲಯ, ರೇಪ್‍ಗೆ ಒಳಗಾದವರು ಒಂದು ವರ್ಷದ ಒಳಗೆ ದೂರು ಸಲ್ಲಿಸಬೇಕು. ಆ ನಂತರ ಬರುವ ದೂರನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಿದೆ.