Connect with us

    DAKSHINA KANNADA

    ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಅರುಣ್ ಕುಮಾರ್ ಪುತ್ತಿಲಗೆ ಪುತ್ತೂರು ನ್ಯಾಯಾಲಯದಿಂದ ಜಾಮೀನು ಮಂಜೂರು

    ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿರುವ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ( arun kumar puttila)  ಪುತ್ತೂರು ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. 
    ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಕುಮಾರ್ ಪುತ್ತಿಲ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ  ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಪುತ್ತೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್.ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.‌ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
    Share Information
    Advertisement
    Click to comment

    Leave a Reply

    Your email address will not be published. Required fields are marked *