ಮಂಗಳೂರು ಎಪ್ರಿಲ್ 05 : ಭಿನ್ನ ಸಾಮರ್ಥ್ಯದ ಮಹಿಳೆಯ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿದ್ದು, ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾರ್ಚ್‌ 28ರಂದು ಈ ಘಟನೆ ನಡೆದಿದ್ದು, ಮೂರು ದಿನಗಳ ಹಿಂದೆ ಈ ಬಗ್ಗೆ ದೂರು ನೀಡಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ತಿಳಿಸಿದರು. ‘ಕೃತ್ಯ ಎಸಗಿರುವ ವೃದ್ಧನೂ (60ರಿಂದ 65 ವರ್ಷ ಪ್ರಾಯ) ಆ ಮಹಿಳೆಯ ಪರಿಚಯಸ್ಥ. ಈ ಘಟನೆ ನಡೆದ ಬಳಿ ಆತ ತಲೆಮರೆಸಿಕೊಂಡಿದ್ದಾನೆ. ಆತನ ಮೊಬೈಲ್‌ ಕೂಡ ಸ್ವಿಚ್‌ ಆಪ್‌ ಆಗಿದೆ. ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

 

ಆರೋಪಿ ವೃದ್ಧ ತನ್ನ ಕುಟುಂಬದ ಜೊತೆ ವಾಸವಾಗಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಸಂತ್ರಸ್ತ ಮಹಿಳೆಯಿಂದ ಮಾಹಿತಿ ಪಡೆದಿದ್ದೇವೆ. ವೃದ್ಧನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 376 ಅಡಿ ಎಫ್‌ಐಆರ್‌ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

Share Information