LATEST NEWS
ಪೆನ್ ಡ್ರೈವ್ ಸದ್ದು, ಲೈಂಗಿಕ ದೌರ್ಜನ್ಯ ಆರೋಪದ ಸಂಸದ ಪ್ರಜ್ವಲ್ ರೇವಣ್ಣ JDS ನಿಂದ ಔಟ್..!
ಬೆಂಗಳೂರು : ಹಾಸನದ ಜೆಡಿಎಸ್ , ಬಿಜೆಪಿ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣ ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
ಇದರ ಬೆನ್ನಲ್ಲೇ ಮುಜುಗರ ತಪ್ಪಿಸಲು ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟಿಸಿ ಮಾಜಿ ಪ್ರಧಾನಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ” ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ” ಎಂದು ಸ್ಪಷ್ಟಪಡಿಸಿದರು.
ಪ್ರಜ್ವಲ್ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜೆಡಿಎಸ್ ಈ ಕ್ರಮ ಕೈಗೊಂಡಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಮುಗಿಬಿದ್ದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆಯೇ ಪಕ್ಷಕ್ಕೆ ಹಾಗೂ ತಮ್ಮ ಕುಟುಂಬಕ್ಕೆ ಆಗಿರುವ ಮುಜುಗರನ್ನು ತಪ್ಪಿಸಿಕೊಳ್ಳಲು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಲಾಗಿದೆ.