Connect with us

  KARNATAKA

  ಸಹಾಯ ಕೇಳಿ ಬಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮೇಲೆ ಪೋಕ್ಸೋ ಕೇಸ್..!

  ಬೆಂಗಳೂರು : ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಿಎಂ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  ಗುರುವಾರ ಸಂಜೆ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದಾರೆ. ದೂರಿನನ್ವಯ ಸದಾಶಿವನಗರ ಪೊಲೀಸ್‌ ಠಾಣೆ ಪೊಲೀಸರು ಗುರುವಾರ ಮಧ್ಯರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆಬ್ರವರಿ 2ನೇ ತಾರೀಖು, ಬಿಎಸ್‌ ಯಡಿಯೂರಪ್ಪ ಅವರ ನಿವಾಸದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಸಹಾಯ ಕೇಳಲು ಹೋಗಿದ್ದಾಗ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

  ದೂರುದಾರರು ತಿಳಿಸಿರುವಂತೆ ತಾಯಿ ಮತ್ತು ಮಗಳು ಫೆಬ್ರವರಿ 2ರಂದು ಬಿಎಸ್‌ ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದರು. ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ ವಿಶೇಷ ತನಿಖಾ ತಂಡ ರಚಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಸಂತ್ರಸ್ತೆ ಹಾಗೂ ಸಂತ್ರಸ್ತೆಯ ತಾಯಿ ಮನವಿ ಮಾಡಲು ಬಿಎಸ್‌ವೈ ಮನೆಗೆ ತೆರಳಿದ್ದರು. ಆ ವೇಳೆ ಬಿಎಸ್‌ ಯಡಿಯೂರಪ್ಪನವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದಲ್ಲದೇ ಬಳಿಕವೇ ಯಡಿಯೂರಪ್ಪನವರು ಕ್ಷಮೆಯಾಚಿಸಿ, ಪ್ರಕರಣದಲ್ಲಿ ನಿಮಗೆ ಸಹಾಯ ಮಾಡುತ್ತೇನೆ, ಈ ಘಟನೆ ಬಗ್ಗೆ ಹೊರಗಡೆ ಎಲ್ಲೂ ಮಾತನಾಡಬಾರದು ಎಂದು ಹೇಳಿರುತ್ತಾರೆ ಎಂದು ಸಂತ್ರಸ್ತೆಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

  ಯಾವುದೇ ಸಮಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು, ಈ ವೇಳೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಅದಲ್ಲದೇ ಪೋಕ್ಸೋ ಪ್ರಕರಣ ದಾಖಲಾಗಿರುವುದರಿಂದ ಬಿಎಸ್‌ ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿದ್ದು, ಬಂಧನದ ಭೀತಿಯೂ ಎದುರಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply