Connect with us

    DAKSHINA KANNADA

    ಮಹಿಳೆಗೆ ಲೈಂಗಿಕ ದೌರ್ಜನ್ಯ : ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR…!

    ಪುತ್ತೂರು: ಪುತ್ತೂರಿನ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ದ ಪ್ರಕರಣ ದಾಖಲಾಗಿದೆ.

    ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಲೈಂಗಿಕ ದೌರ್ಜನ್ಯದ ಫೋಟೊ, ಸೆಲ್ಫಿ ವೀಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿರುವುದಾಗಿ ಆರೋಪಿಸಲಾಗಿದೆ. ಅರುಣ್ ಕುಮಾರ್ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 417, 354A, 506ರಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

    47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ  ಸೆಡ್ಡು ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply