DAKSHINA KANNADA
ಸಿಬಂದಿಗೆ ಲೈಂಗಿಕ ಕಿರುಕುಳ, ಮೂಡಾದ ಆಯುಕ್ತ ಮನ್ಸೂರ್ ಅಲಿಯನ್ನು ಕೂಡಲೇ ಬಂಧಿಸುವಂತೆ ಹೆಚ್ಚಿದ ಒತ್ತಡ..!
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ((ಮೂಡ) ದಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಮೂಡ ಆಯುಕ್ತ ಮನ್ಸೂರ್ ಅಲಿ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು. ತಕ್ಷಣ ಜಿಲ್ಲಾ ಆಡಳಿತ ಈ ಗಮನ ಹರಿಸಿ ಮೂಡದ ಆಯುಕ್ತ ಮನ್ಸೂರ್ ಅಲಿಯನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ವಿಶ್ವಹಿಂದೂ ಪರಿಷತ್ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
ಈ ಬಗ್ಗೆ ವಿಶ್ವ ಹಿಂದೂಪರಿಷತ್ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮತ್ತೊಂದೆಡೆ ಮೂಡ ಆಯುಕ್ತ ಮನ್ಸೂರ್ ಅಲಿಯಿಂದ ಬೆರಳಚ್ಚುಗಾರ್ತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯನ್ನು ದುರ್ಗಾವಾಹಿನಿ ಮಂಗಳೂರು ತೀವ್ರವಾಗಿ ಖಂಡಿಸಿದ್ದು, ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಬಂಧಿಸಿ ಕಠಿಣ ಕಾನೂನುಕ್ರಮ ಕೈಗೊಳ್ಳಲು ಅದು ಆಗ್ರಹಿಸಿದೆ.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಮನ್ಸೂರ್ ಅಲಿ ಕಚೇರಿ ಸಿಬ್ಬಂದಿ ಬೆರಳಚ್ಚುಗಾರ್ತಿಗೆ ಲೈಂಗಿಕ ಕಿರುಕುಳ ನೀಡಿದ್ದು ಈ ಬಗ್ಗೆ ಯುವತಿ ಪೊಲೀಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಮುಡಾ ಆಯುಕ್ತ ಮನ್ಸೂರು ಆಲಿ ತನಗೆ ಲೈಂಗಿಕ, ಮಾನಸಿಕ, ದೈಹಿಕ ಕಿರುಕುಳ ನೀಡಿರುವ ಬಗ್ಗೆ ತಿಳಿಸಿದ್ದಾರೆ. ಕೃತ್ಯವನ್ನು ದುರ್ಗಾವಾಹಿನಿ ತೀವ್ರವಾಗಿ ಖಂಡಿಸುತ್ತದೆ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಹುದ್ದೆಯಿಂದ ಆರೋಪಿ ಮನ್ಸೂರ್ ಅಲಿಯನ್ನು ವಜಾಗೊಳಿಸಬೇಕು ಮತ್ತು ಬಂಧಿಸಿ ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೆವೆ ಇಲ್ಲವಾದರೆ ಮೂಡಾ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದುರ್ಗಾವಾಹಿನಿ ಜಿಲ್ಲಾ ಸಂಯೋಜಕಿ ಶ್ರೀಮತಿ ಶ್ವೇತಾ ಅದ್ಯಪಾಡಿ ಎಚ್ಚರಿಕೆ ನೀಡಿದ್ದಾರೆ,