DAKSHINA KANNADA
ಅನ್ಯಕೋಮಿನ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲು

ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ವರದಿಯಾಗಿದ್ದು, ಆರೋಪಿ ವಿರುದ್ದ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮೈಂದನಡ್ಕ ನಿವಾಸಿ ಆದಂ(56ವ.)ಎಂಬಾತ, ಸ್ಥಳೀಯ ಬಾಲಕಿಯೋಬ್ಬಳು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
