Connect with us

    LATEST NEWS

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಯುವಕ ಅರೆಸ್ಟ್

    ಮಂಗಳೂರು ಜನವರಿ 26: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ತಾಲೂಕಿನ ಮರವೂರಿನಲ್ಲಿ ನಡೆದಿದೆ.


    ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಲಿ ಕಾರ್ಮಿಕರಾಗಿರುವ ಬಾಲಕಿಯ ಪೋಷಕರ ದೂರಿನ ಪ್ರಕಾರ, ವ್ಯಕ್ತಿ ಕಾರ್ಮಿಕರ ಕೋಣೆಗೆ ನುಸುಳಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಘಟನೆ ಜನವರಿ 23 ರಂದು ವರದಿಯಾಗಿದೆ. ಆರೋಪಿಯ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply