Connect with us

    LATEST NEWS

    ಲೈಂಗಿಕ ಕಿರುಕುಳ – ಆರೋಪಿ ಕೆಎಸ್ಎನ್ ರಾಜೇಶ್ ಭಟ್ ಪೊಲೀಸ್ ಕಸ್ಟಡಿಗೆ

    ಮಂಗಳೂರು ಡಿಸೆಂಬರ್ 21: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿ ರಾಜೇಶ್ ಭಟ್ ಅವರಿಗೆ ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.


    ನಗರದ ಮೂರನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಆರೋಪಿಯನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರಿದ್ದರು. ಆದರೆ ನ್ಯಾಯಮೂರ್ತಿ ಅಶ್ವಿನಿ ಕೋರೆ ಆರೋಪಿಯನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದ್ದಾರೆ. ಆರೋಪಿ ರಾಜೇಶ್ ಪರ ವಕೀಲ ಅಶ್ಫಾಕ್ ಬಜ್ಪೆ ವಾದ ಮಂಡಿಸಿದ್ದಾರೆ.

    ಕಾನೂನು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ರಾಜೇಶ್ ಡಿಸೆಂಬರ್ 20 ರಂದು ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *