Connect with us

    LATEST NEWS

    ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಆರೋಪಿ ಅರೆಸ್ಟ್

    ಮಂಗಳೂರು ಜೂನ್ 08: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಬಸ್ ನಲ್ಲಿದ್ದ ಸಹ ಪ್ರಯಾಣಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.


    ಬಂಧಿತನನ್ನು ಬಿಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಪ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಯುವತಿಯ ಪಕ್ಕದ ಸೀಟನಲ್ಲಿ ಕುಳಿತಿದ್ದ ಆರೋಪಿ ಮುಂಜಾನೆ 5 ಗಂಟೆ ಸಂದರ್ಭ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದ್ದಾನೆ. ಈ ವೇಳೆ ಯುವತಿ ಬಸ್ ನ ಸಿಬ್ಬಂದಿಗೆ ಮಾಹಿತಿ ತಿಳಿಸಲು ಮುಂದಾದಾಗ ಆರೋಪಿ ಪಂಪ್ ವೆಲ್ ನಲ್ಲಿ ಬಸ್ಸಿನಿಂದ ಇಳಿದು ಪರಾರಿಯಾಗಿದ್ದಾನೆ. ಈ ಘಟನೆ ಕುರಿತಂತೆ ಯುವತಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply