LATEST NEWS
ಶಬರಿಮಲೆ ಯಾತ್ರೆ ಪ್ರಾರಂಭ…ಈ ಬಾರಿ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ…!!
ಕೇರಳ ನವೆಂಬರ್ 16: ಇಂದಿನಿಂದ ಎರಡು ತಿಂಗಳುಗಳ ಕಾಲ ಶಬರಿಮಲೆ ಅಯ್ಯಪ್ಪ ದೇಗುಲವು ತೆರೆಯಲಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ.
ನಾಳೆಯಿಂದ ಅಯ್ಯಪ್ಪ ಭಕ್ತರಿಗೆ ದೇವರ ದರ್ಶನ ದೊರೆಯಲಿದ್ದು, 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ 27ಕ್ಕೆ ಮುಕ್ತಾಯವಾಗಲಿದೆ. ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಡಿ 30ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು. ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ ವರ್ಷದ ಶಬರಿಮಲೆ ಯಾತ್ರೆ ಋತುಮಾನ ಮುಕ್ತಾಯವಾದಂತೆ ಆಗುತ್ತದೆ.
ಈ ವರ್ಷ ಯಾತ್ರಿಗಳಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ ಇರಲಿದೆ. ಒಂದು ದಿನಕ್ಕೆ ಗರಿಷ್ಠ 1.2 ಲಕ್ಷ ಮಂದಿಗೆ ದರ್ಶನ ಸಿಗಲಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.