Connect with us

LATEST NEWS

ಕತಾರ್ ಸರ್ಕಾರ 8 ಭಾರತೀಯರ ಬಿಡುಗಡೆ ಮಾಡಿದ್ದರ ಹಿಂದೆ  ಶಾರುಖ್ ಖಾನ್: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ..!

ನವದೆಹಲಿ : ಬಿಜೆಪಿ ನಾಯಕ, ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಂಸ್ಥೆ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಯುಎಇ ಮತ್ತು ಕತಾರ್‌ಗೆ ಭೇಟಿ ನೀಡುವಾಗ ಬಾಲಿವುಡ್ ತಾರೆ ಶಾರುಖ್ ಖಾನ್ ಅವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ನೀಡಿದ್ದಾರೆ.

ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ 8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಬ್ರಮಣಿಯನ್ ಸ್ವಾಮೀ ಹೇಳಿದ್ದು ಇದೀಗ ಭಾರಿ ಸುದ್ದಿ ಮಾಡುತ್ತಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಸುಬ್ರಮಣಿಯನ್ ಸ್ವಾಮಿ, ಮೋದಿ ಅವರು ತಮ್ಮೊಂದಿಗೆ ಸಿನಿಮಾ ನಟ ಶಾರುಖ್ ಖಾನ್ ಅವರನ್ನು ಕತಾರ್‌ಗೆ ಕರೆದುಕೊಂಡು ಹೋಗಬೇಕು, ಏಕೆಂದರೆ ವಿದೇಶಾಂಗ ಇಲಾಖೆ ಮತ್ತು NSA ಕತಾರ್‌ನ ಶೇಖ್‌ಗಳನ್ನು ಮನವೊಲಿಸಲು ವಿಫಲವಾದ ನಂತರ, ಮೋದಿ ಖಾನ್‌ಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು ಮತ್ತು ಹೀಗಾಗಿ ನಮ್ಮ ನೌಕಾ ಅಧಿಕಾರಿಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಕತಾರ್ ಪ್ರವಾಸದ ಬಗ್ಗೆ ಪೋಸ್ಟ್‌ವೊಂದನ್ನು ಹಾಕಿದ್ದರು. ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯುಎಇ ಮತ್ತು ಕತಾರ್‌ಗೆ ಭೇಟಿ ನೀಡಲಿದ್ದೇನೆ, ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುತ್ತದೆ. ಯುಎಇಗೆ ನನ್ನ ಭೇಟಿಯು ಅಧಿಕಾರ ವಹಿಸಿಕೊಂಡ ನಂತರ ನನ್ನ ಏಳನೇಯದಾಗಿದೆ, ಇದು ಬಲವಾದ ಭಾರತ-ಯುಎಇ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ HH @MohamedBinZayed ಅವರನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಯುಎಇಯಲ್ಲಿ ಮೊದಲ ಹಿಂದೂ ಮಂದಿರವನ್ನು ಉದ್ಘಾಟಿಸುವ ಗೌರವ ನನಗಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ. ನಾನು @WorldGovSummit ನಲ್ಲಿ ಮಾತನಾಡುತ್ತೇನೆ ಮತ್ತು ದುಬೈನಲ್ಲಿ @HHShkMohd ಅನ್ನು ಭೇಟಿ ಮಾಡುತ್ತೇನೆ. ನಾನು HH ಶೇಖ್ @TamimBinHamad ಅವರನ್ನು ಭೇಟಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.

 

ಇದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ, ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ 8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.ಕತಾರ್‌ನಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ ನ್ಯಾಯಾಲಯವು ಎರಡು ದಿನಗಳ ಮೊದಲು ಬಿಡುಗಡೆ ಮಾಡಿತ್ತು. ಕತಾರ್‌ನಲ್ಲಿ ಸೆರೆಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳು ಭಾರತಕ್ಕೆ ಮರಳಿದ್ದಾರೆ. ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು. ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿತ್ತು. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು. ಆ ಬಳಿಕ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿತ್ತು.

https://x.com/SRKUniverse/status/1756588062795014419?s=20

 

ಕತಾರ್ ನಿಂದ ಭಾರತದ ಮಾಜಿ ನಾವಿಕರ ಬಿಡುಗಡೆಯಲ್ಲಿ ನನ್ನ ಪಾತ್ರವಿಲ್ಲ: ನಟ ಶಾರುಖ್ ಖಾನ್ ಸ್ಪಷ್ಟನೆ

ಬೇಹುಗಾರಿಕೆ ಆರೋಪದಲ್ಲಿ ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ನಾವಿಕರ ಬಿಡುಗಡೆಯಲ್ಲಿ ನನ್ನ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಬಾಲಿವುಡ್ ನಟ ಶಾರುಖ್ ಖಾನ್ ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮಾಡಿದ್ದ ಟ್ವೀಟ್ ವ್ಯಾಪಕ ವೈರಲ್ ಆಗುತ್ತಿರುವ ಬೆನ್ನಲ್ಲೇ ಶಾರುಖ್ ಖಾನ್ ಅವರ ಕಚೇರಿಯು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ಕತಾರ್‌ನಿಂದ ಎಂಟು ನೌಕಾಪಡೆಯ ಪುರುಷರ ಬಿಡುಗಡೆಗೆ ಸಹಾಯ ಮಾಡುವಲ್ಲಿ ಶಾರುಖ್ ಖಾನ್ ಅವರ ಯಾವುದೇ ಪಾಲ್ಗೊಳ್ಳುವಿಕೆ ಇಲ್ಲ ಎಂದು ಹೇಳಿದೆ. “ಕತಾರ್‌ನಿಂದ ಭಾರತದ ನೌಕಾ ಅಧಿಕಾರಿಗಳನ್ನು ಬಿಡುಗಡೆ ಮಾಡುವಲ್ಲಿ ಶಾರುಖ್ ಖಾನ್ ಅವರ ಉದ್ದೇಶಿತ ಪಾತ್ರದ ಕುರಿತಾದ ವರದಿಗಳ ಬಗ್ಗೆ, ನಟ ಶಾರುಖ್ ಖಾನ್ ಅವರ ಕಚೇರಿಯು ಅಂತಹ ಯಾವುದೇ ಸಮರ್ಥನೆಗಳು ಆಧಾರರಹಿತವಾಗಿವೆ ಎಂದು ಹೇಳಿದೆ. ಈ ಯಶಸ್ವಿ ನಿರ್ಣಯದ ಕಾರ್ಯಗತಗೊಳಿಸುವಿಕೆಯು ಕೇವಲ ಭಾರತ ಸರ್ಕಾರದ ಅಧಿಕಾರಿಗಳ ಮೇಲೆ ಮಾತ್ರ ನಿಂತಿದೆ ಮತ್ತು ಈ ವಿಷಯದಲ್ಲಿ ಶಾರುಖ್ ಖಾನ್ ಅವರ ಭಾಗವಹಿಸುವಿಕೆಯನ್ನು ನಾವು ನಿಸ್ಸಂದಿಗ್ಧವಾಗಿ ನಿರಾಕರಿಸುತ್ತೇವೆ ಎಂದು ಹೇಳಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *