Connect with us

    LATEST NEWS

    ಟೋಲ್ ಗೇಟ್ ತೆರವಿನ ವಿಚಾರದಲ್ಲಿ ಬಿಜೆಪಿ ಸರ್ಕಾರದ ಭಂಡತನ ಅಚ್ಚರಿ ಮೂಡಿಸುತ್ತಿದೆ – ಶಕುಂತಲಾ ಶೆಟ್ಟಿ

    ಮಂಗಳೂರು ನವೆಂಬರ್ 01: ಸುರತ್ಕಲ್ ಟೋಲ್ ಗೇಟ್ ತೆರವಿಗೆ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ಅನಿರ್ಧಿಷ್ಟಾವಧಿ ಪ್ರತಿಭಟನೆ ಇದೀಗ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.


    ದಿನ ಘಟಾನುಘಟಿ ನಾಯಕರು ಪ್ರತಿಭಟನೆಗೆ ಆಗಮಿಸುತ್ತಿದ್ದಾರೆ. ನಿನ್ನೆ ರಾತ್ರಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು, ಬಳಿಕ ಮಾತನಾಡಿದ ಅವರು ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ವಿಚಾರದಲ್ಲಿ ಬಿಜೆಪಿ ಸರ್ಕಾರದ ಭಂಡತನ ಅಚ್ಚರಿ ಮೂಡಿಸುತ್ತಿದೆ.

    ತುಳುನಾಡಿನ ಘಟ್ಟದ ತಪ್ಪಲು ಹಾಗೂ ಸಮುದ್ರ ದಂಡೆಯ ಜನರನ್ನು ಬೆಸೆಯುವ ಸಾಧನವಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಪರಿವರ್ತನೆಗೊಂಡಿದೆ. ಬಿಜೆಪಿ, ಶಾಸಕರುಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply