LATEST NEWS
ಕುದ್ರೋಳಿ – ಶಾರ್ಟ್ ಸರ್ಕ್ಯೂಟ್ ನಿಂದಾಗಿ ಪ್ಲ್ಯಾಟ್ ನಲ್ಲಿ ಬೆಂಕಿ ಅವಘಡ

ಮಂಗಳೂರು ಮೇ 06: ಪ್ಲ್ಯಾಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಢ ಸಂಭವಿಸಿದ ಘಟನೆ ಕುದ್ರೋಳಿ ದೇವಸ್ಥಾನದ ಪ್ರವೇಶದ್ವಾರದ ಬಳಿ ಇರುವ ಫ್ಲಾಟ್‌ನಲ್ಲಿ ನಡೆದಿದೆ.
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ಫ್ಲಾಟ್ ಒಳಗೆ ಯಾರೂ ಇರಲಿಲ್ಲ ಎನ್ನಲಾಗಿದೆ. ಐದು ಅಂತಸ್ತಿನ ವಸತಿ ಕಟ್ಟಡದ ಮೂರನೇ ಮಹಡಿಯಲ್ಲಿ ಈ ಘಟನೆ ಸಂಭವಿಸಿದೆ. ಪಕ್ಕದ ಫ್ಲಾಟ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ.ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದವು. ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
