FILM
ಅಮೃತವರ್ಷಿಣಿ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ

ಚೆನ್ನೈ ಮಾರ್ಚ್ 30: ಬಹುಭಾಷಾ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶರತ್ ಬಾಬು ಅವರಿಗೆ 71 ವರ್ಷ ವಯಸ್ಸಾಗಿದ್ದು, ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಹಿನ್ನಲೆಯಲ್ಲಿ ಬುಧವಾರ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹೊರಬಂದಿಲ್ಲ. ಶರತ್ ಬಾಬು ಅವರನ್ನು ನೋಡಲು ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಅಭಿಮಾನಿಗಳು ಕೂಡ ಶರತ್ ಬಾಬು ಆರೋಗ್ಯದಲ್ಲಿ ಶೀಘ್ರದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

ಕನ್ನಡದ ಅಮೃತವರ್ಷಿಣಿ ಚಿತ್ರದಲ್ಲಿ ರಮೇಶ್ ಅರವಿಂದ್, ಸುಹಾಸಿನಿ ಜೊತೆ ಶರತ್ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.