Connect with us

    DAKSHINA KANNADA

    ಶಾರೀಕ್ ವಾರದ ಹಿಂದೆ ಮಂಗಳೂರಿಗೆ ಬಂದು ಸುತ್ತಾಡಿ ಹೋಗಿದ್ದ: ಎಡಿಜಿಪಿ ಅಲೋಕ್ ಕುಮಾರ್

    ಮಂಗಳೂರು, ನವೆಂಬರ್ 21: ನಾಗುರಿ ಬಳಿ ಆಟೋ ರಿಕ್ಷಾ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.

    ಪ್ರಕರಣದ ಆರೋಪಿ ಆಧಾರ್ ಕಾರ್ಡ್ ನಲ್ಲಿ ಹುಬ್ಬಳ್ಳಿಯ ಪ್ರೇಮ್ ರಾಜ್ ವಿಳಾಸ ಇತ್ತು, ಆದರೆ ಅದನ್ನ ಚೆಕ್ ಮಾಡಿದಾಗ ಪ್ರೇಮ್ ರಾಜ್ ತುಮಕೂರಿನಲ್ಲಿ ಇರೋದು ಗೊತ್ತಾಯಿತು. ಪ್ರೇಮ್ ರಾಜ್ ಆಧಾರ್ ಕಾರ್ಡ್ ಕಳೆದು ಹೋಗಿದ್ದು ಗೊತ್ತಾಯಿತು, ಅದೇ ದಿನ ರಾತ್ರಿ ನಾವು ಅವನು ಬಂದ ಜಾಗ ಪತ್ತೆ ಮಾಡಿದೆವು.

    ಶಾರೀಕ್ ಅಗಸ್ಟ್ 15, 2022 ರ ಶಿವಮೊಗ್ಗ ಗಲಾಟೆ ಬಳಿಕ ಅಲರ್ಟ್ ಆಗಿದ್ದ, ಅವನು ಅಗಸ್ಟ್ 23ರ ಬಳಿಕ ಅಲ್ಲಿಂದ ಪರಾರಿಯಾಗಿ ಕೊಯಮತ್ತೂರು, ತಮಿಳುನಾಡು, ಕೇರಳ ಎಲ್ಲಾ ಸುತ್ತಾಡಿ ಮೈಸೂರು ಬಂದಿದ್ದ. ಮೈಸೂರಿನಲ್ಲಿ ರೂಂ ಮಾಡಿ ಮೊಬೈಲ್ ತಯಾರಿ ಇನ್ಸ್ಟಿಟ್ಯೂಟ್ ನಲ್ಲಿ ಕೆಲಸ ಮಾಡುತ್ತಿದ್ದ.

    ನಮಗೆ ಮತ್ತೆ ಅವನ ಫೋಟೋ ನೋಡಿ ಶಾರೀಕ್ ಅಂತ ಗೊತ್ತಾಯ್ತು, ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆ

    2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹ ಕೇಸ್ ನಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿತ್ತು. A1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದಾರಂತೆ. ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವನ ಮಾಹಿತಿ ಗೊತ್ತಾಯ್ತು, ಮಾಝ್ ಮುನೀರ್ ಬಂಧನ ಬಳಿಕ ಶಾಕೀರ ಟ್ರಾಯಲ್ ಬ್ಲಾಸ್ಟ್ ‌ಮಾಡಿದ್ದು ಗೊತ್ತಾಗಿದೆ. ಆದರೆ ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕ ಮೋಹನ್ ಗೆ ಗೊತ್ತಿಲ್ಲ

    ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರು ಬಂದಿದ್ದಾನೆ. ಅಲ್ಲಿ ನಾಗುರಿ ಇಳಿದು ಅವನ ಟಾರ್ಗೆಟ್ ಜಾಗಕ್ಕೆ ಹೋಗ್ತಾ ಇದ್ದ, ಆದರೆ ಅವನು ಎಲ್ಲಿಗೆ ಹೋಗ್ತಾ ಇದ್ದ ಅನ್ನೋದು ಗೊತ್ತಾಗಿಲ್ಲ. ಅವನು ಗುಣಮುಖವಾದ ಬಳಿಕ ವಿಚಾರಣೆಯಲ್ಲಿ ಗೊತ್ತಾಗುತ್ತೆ, ವಾರದ ಹಿಂದೆ ಒಮ್ಮೆ ಮಂಗಳೂರಿಗೆ ಬಂದು ಸುತ್ತಾಡಿ ಹೋಗಿದ್ದ, ಮೈಸೂರಿನಿಂದ ಇಬ್ಬರು ಹಾಗೂ ಮಂಗಳೂರಿನ ಒಬ್ಬರನ್ನ ಪ್ರಕರಣ ಸಂಬಂಧ ವಶಕ್ಜೆ ಪಡೆಯುತ್ತೇವೆ.

    ಇವನು ವಿದೇಶದ ಒಂದು ಟೆರರ್ ಸಂಘಟನೆಯ ಪ್ರಭಾವಕ್ಕೆ ಒಳಗಾಗಿದ್ದ, ತೀರ್ಥಹಳ್ಳಿಯ ಅಬ್ದುಲ್ ‌ಮತೀನ್ ತಾಹಾ ಇದರ ಮೈನ್ ಹ್ಯಾಂಡ್ಲರ್ ಆಗಿದ್ದಾನೆ. ಅವನು ತಲೆಮರೆಸಿಕೊಂಡಿದ್ದು, ಎನ್.ಐ.ಎ 5 ಲಕ್ಷ ರಿವಾರ್ಡ್ ಘೋಷಣೆ ಮಾಡಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *