FILM
ವಂಚನೆ ಪ್ರಕರಣ – ಶಿಲ್ಪಾ ಶೆಟ್ಟಿ ಅವರ ತಾಯಿ ಸುನಂದಾ ಶೆಟ್ಟಿಗೆ ಜಾಮೀನು..!!

ಮುಂಬೈ: ಹಣ ಪಡೆದು ವಾಪಾಸ್ ನೀಡದೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಾಯಿ ಸುನಂದಾ ಶೆಟ್ಟಿ ವಿರುದ್ಧದ ವಾರಂಟ್ ಅನ್ನು ರದ್ದುಗೊಳಿಸಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಮುಂಬೈನ ಉದ್ಯಮಿ ಫರ್ಹಾದ್ ಅಮ್ರಾ ಅವರ ಬಳಿ ಪಡೆದಿದ್ದ ₹21 ಲಕ್ಷ ಸಾಲದ ಹಣವನ್ನು ಮರುಪಾವತಿ ಮಾಡದ ಆರೋಪದ ಮೇಲೆ ಸುನಂದಾ ಶೆಟ್ಟಿ ಕುಟುಂಬದ ವಿರುದ್ಧ ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಸುನಂದಾ ಅವರ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಸುನಂದಾ ಅವರು ಮಂಗಳವಾರ ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ ವಾರೆಂಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಸುನಂದಾ ಅವರ ಮನವಿಯನ್ನು ಅಂಗೀಕರಿಸಿದ್ದು, ₹15,000 ವೈಯಕ್ತಿಕ ಬಾಂಡ್ ಪಡೆದು ಜಾಮೀನು ನೀಡಿದೆ.