FILM
29 ಮಾಧ್ಯಮಗಳ ಮೇಲೆ ಶಿಲ್ಪಾ ಶೆಟ್ಟಿಯಿಂದ ಮಾನನಷ್ಟ ಮೊಕದ್ದಮೆ ದಾಖಲು
ಮುಂಬೈ ಜುಲೈ 29; ಪತಿ ರಾಜ್ ಕುಂದ್ರಾ ಬ್ಲೂಫಿಲ್ಮ್ ದಂಧೆಯಲ್ಲಿ ಪೊಲೀಸ್ ವಶಕ್ಕೆ ಪಡೆದ ಪ್ರಕರಣ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಬಾಲಿವುಡ್ ನಟಿ ಶಿಲ್ಪಾಶೆಟ್ಟಿ 29 ಮಾಧ್ಯಮ ಸಂಸ್ಥೆಗಳ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಪತಿ ರಾಜ್ ಕುಂದ್ರಾ ನೀನಿ ಚಿತ್ರ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ಶಿಲ್ಪಾ ಶೆಟ್ಟಿ ಆರೋಪಿಸಿದ್ದಾರೆ.
ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯವರ ಪಾತ್ರ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.