Connect with us

FILM

ತಾಯಿಯಾಗಿ ಕೇಳಿಕೊಳ್ಳುತ್ತಿದ್ದೆನೆ ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ – ಶಿಲ್ಪಾಶೆಟ್ಟಿ

ಮುಂಬೈ : ಪತಿ ರಾಜ್ ಕುಂದ್ರಾ ಬ್ಲೂಫಿಲ್ಮ್ ನಿರ್ಮಾಣ ಪ್ರಕರಣದಲ್ಲಿ ಪೊಲೀಸ್ ಬಲೆಗೆ ಬಿದ್ದ ನಂತರ ಇದೇ ಮೊದಲ ಬಾರಿಗೆ ಬಾಲಿವುಡ್ ನಟಿ ರಾಜ್ ಕುಂದ್ರಾ ಪತ್ನಿ ಶಿಲ್ಪಾಶೆಟ್ಟಿ ಬಹಿರಂಗ ಹೇಳಿಕೆ ನೀಡಿದ್ದು, ಮಾಧ್ಯಮಗಳಿಗೆ ತಮ್ಮ ಖಾಸಗಿತನವನ್ನು ಗೌರವಿಸುವಂತೆ ಕೋರಿದ್ದಾರೆ.


ರಾಜ್ ಕುಂದ್ರಾ ವಿಚಾರವಾಗಿ ದಿನಕ್ಕೊಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಕುಟುಂಬವನ್ನು ಟ್ರೋಲ್ ಮಾಡಲಾಗುತ್ತಿದೆ. ಇದರಿಂದ ಮನನೊಂದು ಮೊದಲ ಬಾರಿಗೆ ಬಹಿರಂಗವಾಗಿ ಹೇಳಿಕೆ ನೀಡಿರುವ ಶಿಲ್ಪಾ ಶೆಟ್ಟಿ ಮುಂಬೈ ಪೊಲೀಸರು ಮತ್ತು ಭಾರತೀಯ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದ್ದು, ನಿಪಕ್ಷಪಾತ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸುತ್ತಾರೆ ಎಂದು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.


ಈ ವಿಚಾರವಾಗಿ ಕಳೆದ ಕೆಲವು ದಿನಗಳು ನನಗೆ ಸವಾಲುಗಳು ಎದುರಾಗಿವೆ. ಸಾಕಷ್ಟು ವದಂತಿಗಳು ಮತ್ತು ಆರೋಪಗಳು ಕೇಳಿ ಬಂದಿವೆ. ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದನ್ನು ನಿಲ್ಲಿಸಿ, ನನ್ನ ಪರವಾಗಿ ಸುಳ್ಳು ಹೇಳಿಕೆಗಳನ್ನು ನೀಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.


ನಾನು ಹೆಮ್ಮೆಯ ಕಾನೂನು ಪಾಲಿಸುವ ಭಾರತೀಯ ಪ್ರಜೆ. ಜೊತೆಗೆ ಕಳೆದ 29 ವರ್ಷಗಳಿಂದ ಕಠಿಣ ಪರಿಶ್ರಮದ ವೃತ್ತಿಪರತೆಯನ್ನು ಕಾಪಾಡಿಕೊಂಡು ಬರುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಮಾಧ್ಯಮಗಳ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ಹೋಗಿ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *