LATEST NEWS
ಕಟೀಲು ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಮಂಗಳೂರು ಫೆಬ್ರವರಿ 27: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಶಿಲ್ಪಾ ಶೆಟ್ಟಿಗೆ ತನ್ನ ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ , ತಾಯಿ ಸುನಂದ ಜೊತೆ ಕಟೀಲು ದೇವಸ್ಥಾನಕ್ಕೆ ಆಗಮಿಸಿದ್ದರು. ಕಟೀಲು ದುರ್ಗೆಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಟೋಗಳನ್ನು ಹಂಚಿಕೊಂಡಿರುವ ಅವರು ಬ್ಯಾಕ್ ಟು ಹೋಮ್ ಎಂದು ನಮ್ಮ ತುಳುನಾಡು ಎಂದು ಬರೆದಿದ್ದಾರೆ.
https://youtube.com/shorts/2jhNKGUvfQM