KARNATAKA
ಶಿವಮೊಗ್ಗ – ಪತಿ ಮೃತಪಟ್ಟ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆಗೆ ಶರಣು
ಶಿವಮೊಗ್ಗ ಜನವರಿ 1: ಬೈಕ್ ಅಪಘಾತದಲ್ಲಿ ಪತಿ ಸಾವನಪ್ಪಿದ ಸುದ್ದಿ ಕೇಳಿ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಸಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಲ್ಲೆ ಕ್ಯಾತರ ಕ್ಯಾಂಪ್‌ನಲ್ಲಿ ನಡೆದಿದೆ.
ಮೃತರನ್ನು ಮಂಜುನಾಥ್ (25), ಅಮೃತ (21) ಎಂದು ಗುರುತಿಸಲಾಗಿದೆ. . ಮಂಜುನಾಥ್‌ಗೆ ಮಂಗಳವಾರ ಶಿಕಾರಿಪುರದ ಬಳಿ ಅಪಘಾತವಾಗಿತ್ತು. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಪತಿ ಮಂಜುನಾಥ್ ಸಾವಿನಿಂದ ಮನನೊಂದ ಪತ್ನಿ ಅಮೃತ ಮನೆಗೆ ಬಂದು ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಂಜುನಾಥ್ ಹಾಗೂ ಅಮೃತ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ದಂಪತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಹೊಸನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.