KARNATAKA
ಶಿವಮೊಗ್ಗ ಟಿಪ್ಪರ್ ಲಾರಿ ಡಿಕ್ಕಿಗೆ ಕಾರಿನಲ್ಲಿದ್ದ ಇಬ್ಬರ ಸಾವು…!!

ಶಿವಮೊಗ್ಗ : ಟಿಪ್ಪರ್ ಲಾರಿಯೊಂದು ರಸ್ತೆ ಡಿವೈಡರ್ ದಾಟಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಬಳಿ ನಡೆದಿದೆ.
ಮೃತರನ್ನು ಭದ್ರಾವತಿ ನ್ಯೂಟನ್ ನ ಷಣ್ಮುಖ, ರಾಮಚಂದ್ರ ಎಂದು ಗುರುತಿಸಲಾಗಿದೆ. ಇವರು ಕಾರಿನಲ್ಲಿ ಭದ್ರಾವತಿಯಿಂದ ತೀರ್ಥಹಳ್ಳಿಗೆ ಹೊರಟಿದ್ದರು. ಲಾರಿ ಶಿವಮೊಗ್ಗದಿಂದ ಭದ್ರಾವತಿ ಕಡೆ ಸಾಗುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
