Connect with us

    KARNATAKA

    ಬೈಕ್ ಗಳ ನಡುವೆ ಅಪಘಾತ – ರಸ್ತೆ ಮೇಲೆ ಬಿದ್ದ ಸವಾರರ ಮೇಲೆ ಹರಿದ ಲಾರಿ ಮೂವರು ಸ್ಥಳದಲ್ಲೇ ಸಾವು

    ಶಿವಮೊಗ್ಗ ಅಕ್ಟೋಬರ್ 1 : 2 ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ರಸ್ತೆ ಮೇಲೆ ಬಿದ್ದ ಬೈಕ್ ಸವಾರರ ಮೇಲೆ ಲಾರಿಯೊಂದು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.


    ಮೃತರನ್ನು ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂಬುದು ತಿಳಿದುಬಂದಿದೆ.

    ಶನಿವಾರ ರಾತ್ರಿ 2 ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆ ಮೇಲೆ ಬಿದ್ದಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದಿದೆ. ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply