KARNATAKA
ಶಿವಮೊಗ್ಗ – ಮೊಬೈಲ್ ಜಾಸ್ತಿ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ
ಶಿವಮೊಗ್ಗ ಡಿಸೆಂಬರ್ 26: ಜಾಸ್ತಿ ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಧನುಶ್ರೀ(20) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತಿದ್ದ ಧನುಶ್ರೀಗೆ ಹೆಚ್ಚು ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿ ಮಾತಿಗೆ ಬೈದಿದ್ದಾರೆ. ಇಷ್ಟಕ್ಕೆ ನೊಂದ ಧನುಶ್ರೀ ಮೂರು ದಿನದ ಹಿಂದೆ ವಿಷ ಸೇವಿಸಿದ್ದಾಳೆ. ಕೂಡಲೇ ಧನುಶ್ರೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಇದೀಗ ಚಿಕಿತ್ಸೆ ಫಲಿಸದೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.