Connect with us

    KARNATAKA

    ಹಿಜಬ್ vs ಕೇಸರಿ ವಿವಾದ – ರಾಷ್ಟ್ರಧ್ವಜ ಜಾಗದಲ್ಲಿ ಹಾರಿದ ಭಗವಾತ್ ಧ್ವಜ

    ಶಿವಮೊಗ್ಗ ಫೆಬ್ರವರಿ 02: ರಾಜ್ಯದಲ್ಲಿ ಹಿಜಬ್ vs ಕೇಸರಿ ವಿವಾದ ತಾರಕಕ್ಕೇರಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ಈ ಮಧ್ಯೆಯೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಸಂಘರ್ಷ ತಾರಕಕ್ಕೇರಿದೆ. ಅಂತೆಯೇ ಶಿವಮೊಗ್ಗದ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಭಗವಾತ್ ಧ್ವಜ ಹಾರಿಸಿದ್ದಾರೆ.


    ಶಿವಮೊಗ್ಗದ ಬಹುತೇಕ ಕಾಲೇಜುಗಳಲ್ಲಿ ಹಿಜಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಸಹ್ಯಾದ್ರಿ ಕಾಲೇಜ್, ಸರಕಾರಿ ಪದವಿ ಕಾಲೇಜ್ ಹಾಗು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸರಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ಮಾಡಿದ್ದಾರೆ.

    ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ. ಒಟ್ಟನಲ್ಲಿ ಹೈಕೋರ್ಟ್ ವಿಚಾರಣೆ ನಡುವೆಯೇ ರಾಜ್ಯಾದ್ಯಂತ ಹಿಜಬ್- ಕೇಸರಿ ಶಾಲು ಸಂಘರ್ಷ ವಿಕೋಪಕ್ಕೆ ತಿರುಗುತ್ತಿದೆ. ರಾಜ್ಯದ ಹಲವಡೆ ಕಲ್ಲುತೂರಾಟ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಆಯಾ ಕಾಲೇಜಿನ ಆಡಳಿತ ಮಂಡಳಿಗಳು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply