KARNATAKA
ಪೋಟೋ ವಿವಾದ – ಶಿವಮೊಗ್ಗದಲ್ಲಿ ಚಾಕು ಇರಿತ….!!
ಶಿವಮೊಗ್ಗ ಅಗಸ್ಟ್ 15: ಸಾವರ್ಕರ್ – ಟಿಪ್ಪು ಪೋಟೋ ವಿಷಯಕ್ಕೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ವಿವಾದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ ಓರ್ವನಿಗೆ ಚಾಕು ಇರಿದ ಘಟವೆ ನಡೆದಿದೆ. ಪ್ರೇಮ್ ಕುಮಾರ್ ಎಂಬ ಯುವಕರಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.
ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಭಾನುವಾರ ಬೆಳಿಗ್ಗೆಯಿಂದ ಸ್ವಾತಂತ್ರ್ಯ ಸಂಭ್ರಮಾಚರಣೆ ನಡೆಸಿತ್ತು. ಈ ವೇಳೆ ಯುವಕರ ಗುಂಪೊಂದು ವೀರ ಸಾವರ್ಕರ್ ಅವರ ಕಟೌಟ್ ತಂದು ವೃತ್ತದಲ್ಲಿರುವ ಹೈಮಾಸ್ಟ್ ದೀಪಕ್ಕೆ ಕಟ್ಟಲು ಮುಂದಾಗಿದೆ. ಈ ವೇಳೆ ಇನ್ನೊಂದು ಗುಂಪು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಲು ಮುಂದಾಗಿದೆ. ಈ ವೇಳೆ ಎರಡೂ ಗುಂಪಿನವರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಸೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳಕ್ಕೆ ಪೊಲೀಸರು ಬಂದಿದ್ದು, ಗುಂಪುಗಳನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ. ಈ ವೇಳೆ ಕೆಲವರು ವೀರ ಸಾವರ್ಕರ್ ಅವರ ಕಟೌಟ್ ಕಟ್ಟಿದ್ದಾರೆ. ಅದಕ್ಕೆ ಮತ್ತೊಂದು ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ಕೆಲವರು ಕಟೌಟ್ ಹರಿದು ಹಾಕಲು ಮುಂದಾಗಿದ್ದಾರೆ. ಈ ವೇಳೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಗುಂಪುಗಳನ್ನು ಚದುರಿಸಿದ್ದಾರೆ.
ಈ ವೇಳೆ ಕಟೌಟ್ ತೆಗೆಸಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ಸಾವರ್ಕರ್ ಕಟೌಟ್ ಹಾಕಲು ಅವಕಾಶ ನೀಡುವಂತೆ ಸ್ಥಳದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.. ಸ್ಥಳಕ್ಕೆ ಹೆಚ್ಚಿನ ಪಡೆಗಳ ಕರೆಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.