Connect with us

    KARNATAKA

    ಶಿವಮೊಗ್ಗ :ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಕರೆಂಟ್ ಶಾಕಿಗೆ ಯುವಕ ಬಲಿ..!

    ಶಿವಮೊಗ್ಗ :ಮೂತ್ರ ವಿಸರ್ಜನೆಗೆ ಹೋದ ಯುವಕ ಕರೆಂಟ್ ಶಾಕಿಗೆ ಬಲಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು  ಮೃತ ಯುವಕನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದೆ.

    ಬೆಳಗಿನಜಾವ ಮನೆ ಮುಂಭಾಗದ ಐಬಿಎಕ್ಸ್ ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ ಎನ್ನಲಾಗಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದರಿಂದ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆಯೇ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ. ಕಾರ್ತಿಕ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply