LATEST NEWS
270 ಪ್ರಯಾಣಿಕರನ್ನು ಹೊತ್ತು ಮಂಗಳೂರಿಗೆ ಆಗಮಿಸಿದ ‘MS Hamburg’..!

ಮಂಗಳೂರು : ಈ ಋತುವಿನ ಐದನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿತು. 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ನವಮಂಗಳೂರು ಬಂದರಿಗೆ ಆಗಮಿಸಿದ ಹಡಗಿಗೆ ಭವ್ಯವಾದ ಸ್ವಾಗತ ನೀಡಲಾಯಿತು.
ಪ್ರವಾಸಿಗರು ಕ್ರೂಸ್ ಲಾಂಜ್‌ನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮಂಗಳೂರು ಸುತ್ತಮುತ್ತ ಆಕರ್ಷಣೀಯ ಸ್ಥಳಗಳನ್ನು ನೋಡಿ ಖುಷಿಪಟ್ಟರು. ಆಗಮಿಸಿದ ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಮಂಗಳೂರು ನಗರದ ಸುತ್ತಮುತ್ತ ಸಂಚರಿಸಲು ಸಾರಿಗೆ ಬಸ್‌ಗಳು ಮತ್ತು ವಿಶೇಷ ಟ್ಯಾಕ್ಸಿಗಳು, ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ವರ್ಚುವಲ್ ರಿಯಾಲಿಟಿ ಅನುಭವ ವಲಯ, ಉಚಿತ ವೈಫೈ ಸೇರಿದಂತೆ ಅನೇಕ ಸಿದ್ಧತೆಗಳನ್ನು ಮಾಡಲಾಗಿತ್ತು.

ಕಾರ್ಕಳ ಗೋಮಟೇಶ್ವರ ದೇವಸ್ಥಾನ, ಮೂಡಬಿದ್ರಿಯ 1000 ಕಂಬಗಳ ದೇವಸ್ಥಾನ, ಸೋನ್ಸ್ ಫಾರ್ಮ್, ಅಚಲ್ ಗೋಡಂಬಿ ಕಾರ್ಖಾನೆ, ಗೋಕರ್ಣನಾಥ ದೇವಸ್ಥಾನ, ಸೇಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ ಮತ್ತು ನಗರದ ಸಾಂಪ್ರದಾಯಿಕ ಮನೆಗಳಂತಹ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರು. ಮಂಗಳೂರಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ವರ್ಣರಂಜಿತ ಸ್ಮರಣಿಕೆಗಳನ್ನು ಪಡೆದ ಪ್ರಯಾಣಿಕರನ್ನು ಹೊತ್ತ ಹಡಗು ತನ್ನ ಮುಂದಿನ ತಾಣವಾದ ಗೋವಾಕ್ಕೆ ಪ್ರಯಾಣ ಬೆಳೆಸಿತು.