LATEST NEWS
ಕಟೀಲು ದೇವಿಯ ದರ್ಶನ ಪಡೆದ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ

ಮಂಗಳೂರು ಎಪ್ರಿಲ್ 22: ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕುಟುಂಬ ಸಮೇತ ಕಟೀಲು ದೇವಸ್ಥಾವಕ್ಕ ಆಗಮಿಸಿದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಶಿಲ್ಪಾ ಶೆಟ್ಟಿ ಕುಟುಂಬವನ್ನು ಬರಮಾಡಿಕೊಂಡು ಗೌರವಿಸಲಾಯಿತು. ದೇವರ ಶೇಷ ವಸ್ತ್ರ ಪ್ರಸಾದ ನೀಡಲಾಯಿತು.

ಬಳಿಕ ಯಕ್ಷಗಾನವನ್ನು ಶಿಲ್ಪಾಶೆಟ್ಟಿ ವೀಕ್ಷಿಸಿದರು. ಶಿಲ್ಪಾ ಅವರ ಜೊತೆ ಪತಿ ರಾಜ್ ಕುಂದ್ರ, ತಂಗಿ ಶಮಿತಾ ಶೆಟ್ಟಿ ಮತ್ತು ಕುಟುಂಬ ವರ್ಗದವರು ಉಪಸ್ಥಿತರಿದ್ದರು. ದೇವಳದ ಮುಕ್ತೇಸರ ವಾಸುದೇವ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ ಈ ಸಂದರ್ಭ ಉಪಸ್ಥಿತರಿದ್ದರು.