LATEST NEWS
ಇಂದಿನಿಂದ ಶಿರಾಢಿ ಘಾಟ್ ನಲ್ಲಿ ಲಘುವಾಹನ ಸಂಚಾರಕ್ಕೆ ಅವಕಾಶ
ಇಂದಿನಿಂದ ಶಿರಾಢಿ ಘಾಟ್ ನಲ್ಲಿ ಲಘುವಾಹನ ಸಂಚಾರಕ್ಕೆ ಅವಕಾಶ
ಮಂಗಳೂರು ಸೆಪ್ಟೆಂಬರ್ 5 : ಭೂ ಕುಸಿತದಿಂದ ಸಂಪೂರ್ಣ ಬಂದ್ ಆಗಿರುವ ಹಾಸನ, ಮಂಗಳೂರು ನಡುವಿನ ಶಿರಾಡಿಘಾಟ್ ರಸ್ತೆಯಲ್ಲಿ ಇಂದಿನಿಂದ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಕಳೆದ ತಿಂಗಳು ಸುರಿದ ಸತತ ಮಳೆಯಿಂದ ಹಲವು ಕಡೆ ಭೂ ಕುಸಿತ, ಗುಡ್ಡ ಕುಸಿತ ಉಂಟಾಗಿ ಶಿರಾಢಿ ರಸ್ತೆ ಸಂಪೂರ್ಣ ಹಾಳಾಗಿತ್ತು. ಶಿರಾಡಿ ಘಾಟ್ ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದ್ದು. ಸಂಪಾಜೆ ಘಾಟ್‌ಬಳಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಶಿರಾಡಿ ಘಾಟ್ ಬಂದ್ ಆಗಿತ್ತು. ಆದ್ದರಿಂದ, ಚಾರ್ಮಾಡಿ ಘಾಟ್ ಮೇಲೆ ಒತ್ತಡ ಹೆಚ್ಚಾಗಿತ್ತು. ಆದ್ದರಿಂದ, ಶಿರಾಡಿ ಘಾಟ್‌ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು.
ಈ ನಡುವೆ ಶಿರಾಢಿ ಘಾಟ್ ರಸ್ತೆಯಲ್ಲಿ ತುರ್ತು ದುರಸ್ತಿ ಕಾರ್ಯ ನಡೆದಿದೆ. ಪರಿಣತರ ಸೂಚನೆ ಮೇರೆಗೆ ಲಘು ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.
ಈ ಪತ್ರದ ಆಧಾರದ ಮೇಲೆ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಮಂಗಳೂರು ಜಿಲ್ಲಾಧಿಕಾರಿ ಜತೆ ಚರ್ಚಿಸಿ ಮಧ್ಯಾಹ್ನದ ಬಳಿಕ ಆದೇಶ ಹೊರಡಿಸಲಾಗುವುದು. ಸಂಚಾರದ ವೇಳೆ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೇ ಹೊಣೆ’ ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಸಿದ್ದಾರೆ.