LATEST NEWS
ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನ ಸಂಚಾರಕ್ಕೆ ಅವಕಾಶ
ಮಂಗಳೂರು ಜುಲೈ 21: ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ.
ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ. ಕಾರು, ಜೀಪು, ಟೆಂಪೊ, ಮಿನಿ ವ್ಯಾನ್, ಸಾರಿಗೆ ಸಂಸ್ಥೆಯ ಬಸ್, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ ಸಂಚರಿಸಬಹುದು. ಆಂಬುಲೆನ್ಸ್, ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.
ಸಚಿವ ಸಿ.ಸಿ.ಪಾಟೀಲ ಬುಲೆಟ್ ಟ್ಯಾಂಕರ್‌ಗಳು, ಕಾರ್ಗೋ ಕಂಟೈನರ್‌ಗಳು, ಉದ್ದ ಚಾಸಿ ಹೊಂದಿ ವಾಹನಗಳು, ಮಲ್ಟಿ ಎಕ್ಸೆಲ್ ಟ್ರಕ್ ಟ್ರೈಲರ್‌ಗಳು ಹಾಗೂ 20 ಟನ್‌ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜುಲೈ 15 ರಿಂದ ಇಲ್ಲಿಯವರೆಗೆ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.