Connect with us

LATEST NEWS

ಶಿರಾಡಿ ಬಂದ್ ಎಫೆಕ್ಟ್ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಶಿರಾಡಿ ಬಂದ್ ಎಫೆಕ್ಟ್ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಮಂಗಳೂರು ಜನವರಿ 21: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಅಡ್ಡಹೊಳೆಯಿಂದ ಕೆಂಪುಹಳ್ಳದ ತನಕದ 14 ಕಿ.ಮೀ. ರಸ್ತೆ ಕಾಂಕ್ರಿಟೀಕರಣದ ಕಾಮಗಾರಿ ಅಧಿಕೃತವಾಗಿ ಆರಂಭಗೊಂಡಿದ್ದು, ಪೂರ್ವ ನಿಗದಿಯಂತೆ ಜನವರಿ 20ರಂದು ಗುಂಡ್ಯದಲ್ಲಿ ಮತ್ತು ಕೆಂಪುಹಳ್ಳದಲ್ಲಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಪರಿಣಾಮವಾಗಿ ಚಾರ್ಮಾಡಿಘಾಟಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ ಬಹಳಷ್ಟು ಸಮಸ್ಯೆಯಾಗಿದೆ.

ರಸ್ತೆ ಕಾಂಕ್ರೀಟಿಕರಣ ಹಿನ್ನೆಲೆಯಲ್ಲಿ ಶನಿವಾರದಿಂದ ಶಿರಾಡಿ ಘಾಟ್‌ ಸಂಚಾರ ಮುಚ್ಚಿರುವುದರಿಂದ ಚಾರ್ಮಾಡಿ ಘಾಟ್‌ನಲ್ಲಿ ವಾಹನಗಳು ಕಿಲೋ ಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿದ್ದವು.

ಚಾರ್ಮಾಡಿ ಘಾಟ್‌ನಲ್ಲಿ ಘನವಾಹನಗಳಿಗೆ ಸಂಚಾರ ನಿಷೇಧಿಸಿದ್ದು, ಚಾಲಕರಿಗೆ ಮಾಹಿತಿ ಕೊರತೆಯಿಂದ 10 ಚಕ್ರ ಮೇಲ್ಪಟ್ಟ ಘನವಾಹನಗಳು ಚಾರ್ಮಾಡಿ ಘಾಟ್‌ ಮೂಲಕ ಬಂದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ಟ್ರಾಫಿಕ್‌ ಜಾಮ್‌ನಲ್ಲಿ ಆಂಬ್ಯುಲೆನ್ಸ್‌ ಸಿಲುಕಿಕೊಂಡು ಪರದಾಡುವಂತಾಯಿತು.

ಶಿರಾಡಿ ಘಾಟ್‌ ಬಂದ್‌ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್‌ ಮಾರ್ಗದಲ್ಲಿ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

Facebook Comments

comments