DAKSHINA KANNADA
ನವಂಬರ್ 12 ರಿಂದ ಶಿರಾಢಿಘಾಟ್ ರಸ್ತೆ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಮುಕ್ತ

ನವಂಬರ್ 12 ರಿಂದ ಶಿರಾಢಿಘಾಟ್ ರಸ್ತೆ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಮುಕ್ತ
ಮಂಗಳೂರು, ನವಂಬರ್ 07 : ಶಿರಾಡಿ ಘಾಟ್ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಈ ರಸ್ತೆ ನವೆಂಬರ್ 12ರ ಬಳಿಕ ಘನವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಶಿರಾಡಿ ಘಾಟ್ನಲ್ಲಿ ಘನ ವಾಹನಗಳ ಸಂಚಾರಕ್ಕೆ ದಕ್ಷಿಣಕನ್ನಡ ಜಿಲ್ಲೆಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಯಾವುದೇ ಸಮಸ್ಯೆ ಇಲ್ಲ.

ಆದರೆ, ಹಾಸನ ಜಿಲ್ಲೆಯಲ್ಲಿ ಸ್ವಲ್ಪ ಸಮಸ್ಯೆ ಇದೆ.
ದೀಪಾವಳಿಯ ಸಂದರ್ಭ ವಾಹನಗಳ ಸಂಚಾರ ಅಧಿಕವಿದೆ.
ಆದರೆ, ಸದ್ಯ ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿಲ್ಲ.
ನವೆಂಬರ್ 12ರ ನಂತರ ಲಾರಿಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗುವುದು ಎಂದು ಡಿಸಿ ಸಸಿಕಾಂತ್ ಸೆಂಥಿಲ್ ಹೇಳಿದರು.
ಅಗಸ್ಟ್ ತಿಂಗಳಿನಲ್ಲಿ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಗೆ ಶಿರಾಡಿಘಾಟ್ ಸೇರಿದಂತೆ ಪಶ್ಚಿಮಘಟ್ಟದ ಹಲವು ಪ್ರದೇಶಗಳಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತ ಉಂಟಾಗಿತ್ತು.
ಶಿರಾಢಿಘಾಟ್ ನಲ್ಲೂ ಇದೇ ರೀತಿಯ ಭೂಕುಸಿತ ಉಂಟಾದ ಪರಿಣಾಮ ಘಾಟ್ ರಸ್ತೆಯ ಹನ್ನೆರಡು ಕಡೆಗಳಲ್ಲಿ ಹೊಸದಾಗಿ ನಿರ್ಮಿಸಿದ್ದ
ಕಾಂಕ್ರೀಟ್ ರಸ್ತೆಗೆ ಹಾನಿಯಾಗಿತ್ತು.
ಈ ಕಾರಣಕ್ಕಾಗಿ ಘಾಟ್ ರಸ್ತೆಯ ಕೆಲವು ಕಡೆಗಳಲ್ಲಿ ಏಕಮುಖ ಚಾಲನೆಯ ಮೂಲಕ ಲಘು ವಾಹನ ಹಾಗೂ ಬಸ್ ಗಳಿಗೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿತ್ತು.
ಇದೀಗ ಘಾಟ್ ರಸ್ತೆಯ ಕಾಮಗಾಗಿ ಪೂರ್ಣಗೊಂಡ ಹಿನ್ನಲೆಯಲ್ಲಿ ಘನ ವಾಹನಗಳ ಸಂಚಾರಕ್ಕೂ ನವಂಬರ್ 12 ರಿಂದ ನೀಡಲಾಗುವುದು.