Connect with us

KARNATAKA

ಶಿರಸಿ- ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ – ಐವರ ಬಲಿ

ಕಾರವಾರ ಡಿಸೆಂಬರ್ 08 : ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ.

ಮೃತರು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದ ಮದುವೆಗೆ ಆಗಮಿಸುತ್ತಿದ್ದ ಮಂಗಳೂರಿನ ರಾಮಕೃಷ್ಣ ಬಾಬುರಾವ್ (71), ವಿದ್ಯಾಲಕ್ಷ್ಮೀ ರಾಮಕೃಷ್ಣ(65), ಪುಷ್ಪಾ ಮೋಹನ ರಾವ್ (62), ಸುಹಾಸ್ ಗಣೇಶ ರಾವ್ (30), ಹಾಗೂ ಚೆನ್ನೈನ ಅರವಿಂದ(30) ಎಂದು ಗುರುತಿಸಲಾಗಿದೆ.

 

ಕಾರಿನಲ್ಲಿದ್ದ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದರೆ. ಮತ್ತೊಬ್ಬರು ಅವರ ಸ್ನೇಹಿತರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *