LATEST NEWS
ಶಿರ್ವ – ಭೀಕರ ರಸ್ತೆ ಅಪಘಾತ ಕಾರಿನಲ್ಲಿದ್ದ ಇಬ್ಬರು ಸಾವು….!!

ಶಿರ್ವ ಡಿಸೆಂಬರ್ 24: ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಹಾಗೂ ಯುವಕ ಸಾವನಪ್ಪಿರುವ ಘಟನೆ ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ನಡೆದಿದೆ.
ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಮೂಡಬಿದಿರೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರಿಗೆ ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಟೆಂಪೋ ಮುಖಾಮುಖಿಯಾಗಿ ಅವಘಡ ಸಂಭವಿಸಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿತ್ತು. ಉಡುಪಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಸಿಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
