LATEST NEWS
ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಕಂಬಳ

ಉಡುಪಿ: ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯ ಬದ್ದ ಕಂಬಳ ರವಿವಾರ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಫುಲ್ಲ ಶೆಟ್ಟಿ ಕಂಬಳವನ್ನು ಉದ್ಘಾಟಿಸಿದರು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು.
ಅನಾದಿಕಾಲದಿಂದಲೂಸಂಪ್ರದಾಯ ಬದ್ಧವಾಗಿ ನಡೆಯುತ್ತಿದ್ದ ಶಿರ್ವ ನಡಿಬೆಟ್ಟು ಕಂಬಳವು 1996 ರಿಂದ 2014ರವರೆಗೆ ಸೂರ್ಯಚಂದ್ರ ಜೋಡುಕರೆಯಾಗಿ ನಡೆದು ಪ್ರಸಿದ್ದಿಯಾಗಿತ್ತು.

https://youtu.be/XVlKLvyBFlk