LATEST NEWS
ಶಿರ್ವ- ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

ಶಿರ್ವ ಫೆಬ್ರವರಿ 25: ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಈ ವೇಳೆ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
