KARNATAKA
ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ
ಶಿವಮೊಗ್ಗ, ಅಕ್ಟೋಬರ್ 25: ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೀಗೆಹಟ್ಟಿಯ ಹಿಂದೂ ಕಾರ್ಯಕರ್ತ ಮೃತ ಹರ್ಷ ಕುಟುಂಬಸ್ಥರಿಗೆ ಬೆದರಿಕೆ ಬಂದಿದೆ.
ಸೀಗೆಹಟ್ಟಿಯ ನಿವಾಸ, ರವಿ ವರ್ಮ ಬೀದಿ, ಕೆ.ಆರ್ ಪುರಂ ರಸ್ತೆ ಮುಂತಾದೆಡೆ 2 ಬೈಕ್‍ಗಳಲ್ಲಿ ಬಂದ 6 ಮಂದಿ ಮುಸ್ಲಿಂ ಯುವಕರು ಮಚ್ಚು-ಲಾಂಗ್ ಹಿಡಿದು ಭಯ ಹುಟ್ಟಿಸಿದ್ದಾರೆ. ಮುಸ್ಲಿಂ ಪರ ಘೋಷಣೆ ಕೂಗುತ್ತಾ, ಲಾಂಗ್ ಬೀಸಿದ್ದಾರೆ.
ಮತ್ತೊಂದೆಡೆ ಸಿಗೇಹಟ್ಟಿಯಲ್ಲಿ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದ್ದು, ಪ್ರಕಾಶ್ (25) ಎಂಬಾತ ಗಾಯಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆಯಷ್ಟೇ ಆಜಾದ್ ನಗರದಲ್ಲಿ ಕಾರು ಜಖಂ ಪ್ರಕರಣಕ್ಕೆ ಸಂಬಂಧಿಸಿ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್‍ನಲ್ಲಿ ಬಂದ 10 ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದರು. ಈ ವೇಳೆ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಹಾನಿಯಾಗಿತ್ತು. ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿತ್ತು