KARNATAKA
ಶಿವಮೊಗ್ಗ – 6 ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು

ಶಿವಮೊಗ್ಗ ಫೆಬ್ರವರಿ 16: 6 ದಿನಗಳ ಹಿಂದೆಯಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಮೃತ ಮಹಿಳೆಯನ್ನು ಮಾಳೂರು ಗ್ರಾಮದ ಮಂಜುಳಾ (25) ಎಂದು ಗುರುತಿಸಲಾಗಿದೆ. ಫೆಬ್ರವರಿ .10 ರಂದು ಅವರಿಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅವರು ಸಾವಿಗೀಡಾಗಿದ್ದಾರೆ.
