Connect with us

    FILM

    ನಟ ದರ್ಶನ ಮೇಲೆ ಚಪ್ಪಲಿ ಎಸೆತ…ಶಿವರಾಜ್ ಕುಮಾರ್ ಪ್ರತಿಕ್ರಿಯೆ…!!

    ಬೆಂಗಳೂರು ಡಿಸೆಂಬರ್ 19: ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಪ್ರಚಾರ ಸಂದರ್ಭ ನಟ ದರ್ಶನ ಅವರ ಮೇಲೆ ಚಪ್ಪಲಿ ಎಸೆದಿರುವ ಘಟನೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಈ ಘಟನೆ ನನ್ನ ಮನಸ್ಸಿಗೆ ನೋವುಂಟು ಮಾಡಿದೆ ಎಂದಿದ್ದಾರೆ.


    ಟ್ವೀಟ್ ಮಾಡಿರುವ ಅವರು, ” ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ” ಎಂದು ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply