LATEST NEWS
ಡಿವಿ ರಾಜೀನಾಮೆ – ಸಂಸದೆ ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ
ದೆಹಲಿ ಜುಲೈ 7: ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ನಡೆಯಲಿದ್ದು, ಈ ಬಾರಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಳಾಗಿದ್ದು, ಈಗಾಗಲೇ ಅವರು ದೆಹಲಿಗೆ ತೆರಳಿದ್ದಾರೆ.
ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಈಗಗಾಲೇ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಸೇರಿದಂತೆ ಆರು ಮಂದಿ ಸಚಿವರು ರಾಜೀನಾಮೆ ನೀಡಿದ್ದಾರೆ. ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್, ರಾಜ್ಯ ಖಾತೆ ಸಚಿವರಾದ ರಾವೋಸಾಹೇಬ್ ದನ್ವೆ, ಸಂಜಯ್ ಧೋತ್ರೆ ಮತ್ತು ದೇಬಶ್ರೀ ಚೌಧರಿ ಸಹ ರಾಜೀನಾಮೆ ನೀಡಿದ್ದಾರೆ.
ಹೊಸದಾಗಿ ಸಂಪುಟ ಸೇರುವ ನಿರೀಕ್ಷೆಯಲ್ಲಿರುವ ಜ್ಯೋತಿರಾದಿತ್ಯ ಸಿಂಧಿಯಾ, ನಾರಾಯಣ ರಾಣೆ ಸೇರಿದಂತೆ 24 ಮಂದಿ ಬೆಳಿಗ್ಗೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಚಿಕ್ಕಮಗಳೂರು–ಉಡುಪಿ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೂ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ. ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ ಅವರು ಮೋದಿಯನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಹಣಕಾಸು ಖಾತೆ ರಾಜ್ಯ ಸಚಿವರಾಗಿರುವ ಅನುರಾಗ್ ಠಾಕೂರ್ ಸೇರಿದಂತೆ ಮೂವರಿಗೆ ಸಂಪುಟ ದರ್ಜೆಗೆ ಬಡ್ತಿ ನೀಡಲಾಗುತ್ತದೆ. ಶೋಭಾ ಕರಂದ್ಲಾಜೆ, ಮೀನಾಕ್ಷಿ ಲೇಖಿ, ಅನುಪ್ರಿಯಾ ಪಟೇಲ್ ಸೇರಿದಂತೆ ಐವರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಂಪುಟ ಪುನರ್ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ರಾಜೀನಾಮೆ ನೀಡಿದ್ದಾರೆ. ಇನ್ನೂ 3–4 ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ಇದೆ.