KARNATAKA
ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧೆ – ಶೋಭಾ ಕರಂದ್ಲಾಜೆ

ತುಮಕೂರು ಜನವರಿ 24 : ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ’ ಎಂದರು. ‘ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.
