LATEST NEWS
ಮದುವೆ ವಯಸ್ಸು 21 ಕ್ಕೆ ಏರಿಕೆ ಮಾಡಿರುವುದು ಹಿಂದೂ ಧರ್ಮಕ್ಕೆ ಮಾತ್ರವಲ್ಲ ಎಲ್ಲರಿಗೂ ಅನ್ವಯ – ಶೋಭಾ ಕರಂದ್ಲಾಜೆ
ಉಡುಪಿ ಡಿಸೆಂಬರ್ 23: ಮದುವೆ ವಯಸ್ಸನ್ನು 21ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸ್ವರ್ಣವಲ್ಲಿ ಸ್ವಾಮೀಜಿ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಕಾನೂನು ಕೇವಲ ಹಿಂದೂ ಧರ್ಮಕ್ಕೆ ಮಾತ್ರವಲ್ಲ ದೇಶದ ಎಲ್ಲ ನಾಗರಿಕರಿಗೂ ಅನ್ವಯ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಮದುವೆ ವಯಸ್ಸಿಗೂ ಜನಸಂಖ್ಯೆಗೆ ಸಂಬಂಧ ಇಲ್ಲ, ಯುವತಿಯ ವಯಸ್ಸು 21 ಆದರೆ ಆಕೆಯ ಪದವಿ ಆಗಿರುತ್ತದೆ, 21 ವಯಸ್ಸಿಗೆ ಪ್ರಭುದ್ಧತೆ ಬಂದಿರುತ್ತದೆ, ವಯಸ್ಸು 22 ಆಗುವ ಮೊದಲು ಯಾರು ಮದುವೆ ಮಾಡಬಾರದು. ಇಡೀ ದೇಶದಲ್ಲಿ ಹದಿನೆಂಟನೇ ವಯಸ್ಸಿಗೆ ಮದುವೆ ಮಾಡುತ್ತಾರೆ ಎಂಬ ಅಭಿಪ್ರಾಯ ತಪ್ಪು, ಆದರೆ ಸ್ವರ್ಣವಲ್ಲಿ ಸ್ವಾಮಿಜಿ ಮಾತಿಗೆ ನಾನು ವಿರೋಧ ಮಾಡಲ್ಲ, ಈ ಕಾನೂನು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಕಾನೂನು ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ, ಈ ಕಾನೂನನ್ನ ದೇಶದ ಎಲ್ಲರೂ ಪಾಲನೆ ಮಾಡಬೇಕು ಎಂದರು.
ಚಿಕ್ಕ ವಯಸ್ಸಿನಲ್ಲಿ ಮದುವೆಯಾದರೆ ಗರ್ಭಪಾತ ಆಗಬಹುದು, ಮಕ್ಕಳ, ಬಾಣಂತಿಯ ಮರಣ ಸಾವುಗಳು ಜಾಸ್ತಿಯಾಗಿದೆ. ತಾಯಿ ಮಗುವಿನ ಮರಣಪ್ರಮಾಣ ತಡೆಯಲು ಈ ನಿರ್ಧಾರ, ವೈಜ್ಞಾನಿಕ ವರದಿ ಪರಿಶೀಲನೆ ಮಾಡಿ ಈ ನಿರ್ಧಾರಕ್ಕೆ ಬರಲಾಗಿದೆ. ಶಿಶು ಮರಣ ಮತ್ತು ಗರ್ಭಿಣಿ ಮರಣ ತಪ್ಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಹೇಳಿದ್ದಾರೆ.