LATEST NEWS
ಮಹಾರಾಷ್ಟ್ರದಲ್ಲಿರುವ ಉಡುಪಿ ಜಿಲ್ಲೆಯ ಜನತೆಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ

ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ಬೆಡ್ ಸೌಲಭ್ಯ ಕೊರತೆ
ಉಡುಪಿ, ಜೂ.5: ಮಹಾರಾಷ್ಟ್ರದಿಂದ ಆಗಮಿಸಿದವರಿಂದ ಉಡುಪಿಯಲ್ಲಿ ಕೊರೊನಾ ಸ್ಪೋಟವಾಗಿದ್ದು, ಸದ್ಯ ಜಿಲ್ಲೆಯಲ್ಲಿ ಬೆಡ್ ಹಾಗಾ ಕ್ವಾರಂಟೈನ್ ಕೇಂದ್ರಗಳ ಕೊರತೆಯಿದ್ದು ಉಡುಪಿಗೆ ಮಹಾರಾಷ್ಟ್ರದಿಂದ ಆಗಮಿಸುವವರಿಗೆ ನೀಡುವ ಪಾಸ್ ನ್ನು ತಡೆಯುವಂತೆ ರಾಜ್ಯ ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದ್ದೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಉಡುಪಿ ಜಿಲ್ಲೆಯ ಕೊರೋನ ಸೋಂಕಿತರಲ್ಲಿ ಬಹುತೇಕ ಮಂದಿ ಮಹಾರಾಷ್ಟ್ರದಿಂದ ಬಂದವರಿದ್ದಾರೆ. ಹೋಂ ಕ್ವಾರಂಟೈನ್‌ನಲ್ಲಿರುವರಿಂದ ಎಷ್ಟು ಮಂದಿಗೆ ಈ ವೈರಸ್ ಹರಡಿದೆ ಎನ್ನುವುದು ಗೊತ್ತಿಲ್ಲ. ಇಂತಹ ಮನೆಯಲ್ಲಿರುವ ಇತರ ಕಾಯಿಲೆಯಿಂದ ಬಳಲುತ್ತಿರುವವರನ್ನು ನಾವು ರಕ್ಷಣೆ ಮಾಡಬೇಕಾಗಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಕೊರೋನ ಸ್ಫೋಟದ ನಂತರವೂ ಮಹಾರಾಷ್ಟ್ರದಿಂದ ಆನ್‌ಲೈನ್ ಅರ್ಜಿ ಸಲ್ಲಿಸಿ, ಪಾಸ್ ಪಡೆದು 281 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರದಿಂದ ಬಹಳ ಕಡಿಮೆ ಜನ ಬಂದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಾಗಿದೆ. ಎಂಎಚ್‌ಐ ಮಾರ್ಗಸೂಚಿ ಪ್ರಕಾರ ಬರುವವರನ್ನು ತಡೆಯುವಂತಿಲ್ಲ. ಆದುದರಿಂದ ಮಹಾರಾಷ್ಟ್ರದಲ್ಲಿರುವ ಜಿಲ್ಲೆಯ ಜನತೆ ಸದ್ಯ ಉಡುಪಿಗೆ ಬಾರದಂತೆ ಮನವಿ ಮಾಡುತ್ತಿದ್ದೇನೆ ಎಂದರು.