LATEST NEWS
ಡಿ.ದೇವರಾಜು ಅರಸು ಅವರಿಂದ ಹಿಂದುಳಿದ ವರ್ಗಗಳಿಗೆ ಶಕ್ತಿ : ಶೋಭಾ ಕರಂದ್ಲಾಜೆ
ಉಡುಪಿ, ಆಗಸ್ಟ್ 20 : ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಶ್ರೀ. ಡಿ ದೇವರಾಜ ಅರಸು ಅವರು , ಅವರ ಸಮಸ್ಯೆಗಳಿಗೆ ದನಿಯಾಗಿ , ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ , ಆರ್ಥಿಕ ಮತ್ತು ಶೈಕ್ಷಣಿಕವಾಗಿ ಶಕ್ತಿ ತುಂಬಿದ ಮಹಾನ್ ವ್ಯಕ್ತಿ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ , ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಿದ್ದ, ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಶ್ರೀ.ಡಿ ದೇವರಾಜ ಅವರಸು ಅವರ 108 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅರಸು ಅವರು , ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಅಭಿವೃಧ್ದಿಗೆ ಶ್ರಮಿಸಿದ್ದು, ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಾಸ್ಟೆಲ್ ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದು, ಶತಮಾನಗಳ ಕಾಲ ನೆನಪಿನಲ್ಲಿಕೊಟ್ಟಳುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಸದಾ ಸ್ಮರಣೀಯರಾಗಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಎ ಸುವರ್ಣ ಮಾತನಾಡಿ, ರಾಜ್ಯ ಕಂಡ ಧೀಮಂತ ನಾಯಕ ಡಿ.ದೇವರಾಜ ಅರಸು ಅವರು ರಾಜ್ಯದ ಜನಸಂಖ್ಯೆಯಲ್ಲಿ ಬಹುಸಂಖ್ಯಾತವಾಗಿರುವ ಹಿಂದುಳಿದ ವರ್ಗಗಳ ಅಭಿವೃಧ್ದಿಗೆ ಶ್ರಮಿಸಿದ್ದಾರೆ. ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳ ಬಹುತೇಕ ಮಂದಿ ಆರ್ಥಿಕವಾಗಿ ಹಿಂದುಳಿದಿದ್ದು, ಅವರೆಲ್ಲರನ್ನೂ ಒಗ್ಗೂಡಿಸಿ ಶಕ್ತಿ ತುಂಬಬೇಕಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣ ನಡೆಯಬೇಕು ಮತ್ತು ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿಯ ಶಾಲೆಯ ಪುನಾರಾರಂಭ ಆಗಬೇಕಿದೆ ಎಂದರು. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ರಾಷ್ಟç ಪ್ರಶಸ್ತಿ ವಿಜೇತ ಮಾಜಿ ಶಿಕ್ಷಕ ಹಾಗೂ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ರಾಘವೇಂದ್ರ ಉಪನ್ಯಾಸ ನೀಡಿದರು.
You must be logged in to post a comment Login