ಬೆಂಗಳೂರು ಎಪ್ರಿಲ್ 02: ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದ ಕಾಂಗ್ರೇಸ್ ವಿರುದ್ದ ಇದೀಗ ಬಿಜೆಪಿ ಮುಖಂಡರು ಕಿಡಿಕಾರಿದ್ದು, ನಿಮಗೆ ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.


ಇಂದು ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ಕುರಿತು ಪ್ರಸ್ತಾಪಿಸಿತ್ತು. ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡಾಮಂಡಲರಾಗಿದ್ದಾರೆ.

ವಿನಾಶಕಾಲ ವಿಪರೀತ ಬುದ್ಧಿ ಅನ್ನುವಂತೆ ಇದೆ ಕಾಂಗ್ರೆಸ್ ನಡೆ. ಕಾಂಗ್ರೆಸ್‌ನ ವಿನಾಶ ಕಾಲ‌ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್‌ನವರು ಪಿಎಫ್ಐ ನಿಷೇಧ ಮಾಡ್ತೀವಿ. ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್‌ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.

Share Information